ಉಡುಪಿ: ಕೇಂದ್ರ ಸರಕಾರ, ಕರ್ನಾಟಕ ರಾಜ್ಯಕ್ಕೆ ಹಿಂದಿನ ವರ್ಷಗಳ ವಸತಿ ಯೋಜನೆಯ ಅನುಷ್ಠಾನಕ್ಕಾಗಿ ಗ್ರಾಮೀಣ ವಸತಿ ಯೋಜನೆಗೆ 400 ಕೋಟಿ ರೂ. ಹಾಗೂ ನಗರ ವಸತಿ ಯೋಜನೆಗೆ 75 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ನಡೆಸಿದ ಉಡುಪಿ ಜಿಲ್ಲೆಯ ನಗರ ಸ್ಥಳೀಯಾಡಳಿತದ ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಅಧಿಕಾರಿಗಳ ಸಭೆಯಲ್ಲಿ ಅವರು ಈ ವಿಷಯ ಪ್ರಕಟಿಸಿದರು.
ನಗರಾಡಳಿತ ಸಂಸ್ಥೆಗಳ ವಾಜಪೇಯಿ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಕೋಟ, ಸಾದ್ಯವಾದಷ್ಟು ಬೇಗ ವಸತಿ ಯೋಜನೆಯಲ್ಲಿ ಪ್ರಗತಿಯನ್ನು ಸಾಧಿಸಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಲು ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





