ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಪ್ಯಾಕೇಜ್‌ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ ಎಂದು ದತ್ತಿ ಇಲಾಖೆ ತಿಳಿಸಿದೆ.
ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ. ಪ್ರವರ್ಗ ʼಸಿʼ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು / ನೌಕರರು ಭಾರತ್ ಗೌರವ್ ದ್ವಾರಕಾ ಯಾತ್ರೆ ತೆರಳಲು ಇಚ್ಛಿಸಿದ್ದಲ್ಲಿ ದಾಖಲೆಗಳೊಂದಿಗೆ ಆಯುಕ್ತರ ಕಚೇರಿಗೆ ನೇರವಾಗಿ ಸೆ.20ರ ಒಳಗಾಗಿ ಮನವಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಹಾಗೂ ಟಿಕೆಟ್ ಬುಕ್ ಮಾಡಲು 9003140710, 8595931292, 8595931294, 9731641611, 8595931293, 8595931291 ಗೆ ಸಂಪರ್ಕಿಸಲು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

