Breaking News

ಅವಳಿ ನಗರದಲ್ಲಿರುವ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ನಾರಾಯಣ ಕಿರೆಸೂರ

ಹುಬ್ಬಳ್ಳಿ: ಅವಳಿ ನಗರದಲ್ಲಿರುವ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲ ಕಾರ್ಯಕರ್ತರು ಅನ್ನೋನ್ಯತೆಯಿಂದ ಇದ್ದೇವೆ. ಪ್ರಹ್ಲಾದ್ ಜೋಶಿ ಹಾಗೂ ಮಹೇಶ್ ಟೆಂಗಿನಕಾಯಿ ಎಲ್ಲವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ನಾರಾಯಣ ಕಿರೆಸೂರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

ಅವಳಿ ನಗರದ ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ. ಜಗದೀಶ್ ಶೆಟ್ಟ‌ರ್ ಕಾಂಗ್ರೆಸ್‌ ತೊರೆದು ಮರಳಿ ಬಿಜೆಪಿಗೆ ಬಂದಿದ್ದು ಆನೆ ಬಲವನ್ನು ತಂದಿದೆ. ಎಲ್ಲರೂ ಅದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.ಶಾಸಕ ಮಹೇಶ ಟೆಂಗಿನಕಾಯಿ ಎಲ್ಲ ಬಿಜೆಪಿ ಕಾರ್ಯಕರ್ತರನ್ನು ಅಣ್ಣ ತಮ್ಮಂದಿರ ರೀತಿಯಲ್ಲಿ ನೋಡಿಕೊಂಡು ಹೋಗುತ್ತಿದ್ದಾರೆ.

ಈಗಾಗಲೇ ಅವಳಿ ನಗರದ ಬಿಜೆಪಿ ಮುಖಂಡರು ಎಲ್ಲವನ್ನು ನಿಭಾಯಿಕೊಂಡು ಹೊರಟಿದ್ದಾರೆ. ಮುಂದೆ ಬರುವ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರಲ್ಲಿರುವ ಆಂತರಿಕ ಭಿನ್ನಾಭಿಪ್ರಾಯ ಸರಿ ಪಡಿಸಿ ಪಕ್ಷವನ್ನು ಬೆಳೆಸುವ ಕಾರ್ಯವನ್ನು ಮಾಡಲಾಗುತ್ತೆ ಅಂತಾ ಬಿಜೆಪಿ ಮುಖಂಡ ನಾರಾಯಣ ಕಿರೆಸೂರ ಹೇಳಿದ್ರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *