Breaking News

ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಸಿದ್ಧತೆ: ಜಗದೀಶ ಶೆಟ್ಟರ್‌

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲು ಅಗತ್ಯವಿರುವ ಎಲ್ಲ ಮೂಲಸೌಕರ್ಯ ಸಿದ್ಧಪಡಿಸಲಾಗುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸುವ ಕುರಿತಾಗಿ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಭಾರತೀಯ ವಾಯುಪಡೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡದ ಕಾಮಗಾರಿ ಶೇ 30ರಷ್ಟು ಮುಗಿದಿದೆ. ಇಲ್ಲಿ ಕಾರ್ಗೋ ಸೇವೆಗಳಿಗೆ ಹೆಚ್ಚಿನ ಬೇಡಿಕೆ ಇದೆ. 2025ರ ವೇಳೆಗೆ ಈ ಕಾಮಗಾರಿ ಪೂರ್ಣಗೊಂಡ ನಂತರ, ಈಗಾಗಲೇ ಅಸ್ತಿತ್ವದಲ್ಲಿರುವ ಟರ್ಮಿನಲ್ ಅನ್ನು ಕಾರ್ಗೋ ಸೇವೆಗಳಿಗೆ ಬಳಸಿಕೊಳ್ಳಲಾಗುವುದು. ಈ ಭಾಗದ ಕೈಗಾರಿಕೆಗಳ ಬೇಡಿಕೆಗಳನ್ನು ನೀಗಿಸಲಾಗುವುದು ಎಂದು ಹೇಳಿದರು.
ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೇರಿದ ಸುಮಾರು 14 ಎಕರೆ ಜಮೀನು ಭಾರತೀಯ ವಾಯುಪಡೆ ನಿಯಂತ್ರಣದಲ್ಲಿದೆ. ಅದು ಹಸ್ತಾಂತರವಾದ ನಂತರ, ಅಗತ್ಯ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ವಿಮಾನ ನಿಲ್ದಾಣದ ಕಾಮಗಾರಿಯ ಪ್ರಗತಿ ಪರಿಶೀಲನೆ ನಿಯಮಿತವಾಗಿ ಮಾಡುತ್ತಿದ್ದೇವೆ, ಮಾಸಿಕ ಸಭೆ ನಡೆಸುತ್ತಿದ್ದೇವೆ. ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *