ನವದೆಹಲಿ: ಕೇಂದ್ರ ಸರ್ಕಾರದ ಎನ್‌ಪಿಎಸ್ ವಾತ್ಸಲ್ಯ ಯೋಜನೆಗೆ ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಈ ತಿಂಗಳ 18 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಜೆ.ಸಿ. ರಸ್ತೆಯ ಕೆನರಾ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಆಯೋಜಿಸಲಾಗುವ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡು ಯೋಜನೆಯನ್ನು ಉದ್ಘಾಟಿಸಲಿದ್ದಾರೆ ಎಂದು ಕೆನರಾ ಬ್ಯಾಂಕ್ ಪ್ರಕಟಣೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

