Breaking News

ಪ್ರಧಾನಿ ಮೋದಿಯವರಿಂದ ಜಮ್ಮುಕಾಶ್ಮೀರ ಹಾಗೂ ಹರಿಯಾಣದಲ್ಲಿ ಚುನಾವಣಾ ಪ್ರಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮೊದಲು ದೋಡಾಗೆ ತೆರಳುವ ಅವರು ನಂತರ ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ತನ್ನ ಸಾಮಾಜಿಕ ಜಾಲ ತಾಣ ಎಕ್ಸನಲ್ಲಿ ವಿವರಗಳನ್ನು ಹಂಚಿಕೊಂಡಿದೆ.
ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇದಾದ ಬಳಿಕ ಹರಿಯಾಣದ ಕುರುಕ್ಷೇತ್ರದಲ್ಲಿ ರ್ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಕುರುಕ್ಷೇತ್ರದಲ್ಲಿ ಮಧ್ಯಾಹ್ನ ನಾಲ್ಕರಿಂದ ರ್ರ್ಯಾಲಿ ನಡೆಯಲಿದೆ. ಜಮ್ಮುಕಾಶ್ಮೀರದಲ್ಲಿ ಹತ್ತು ವರ್ಷಗಳ ನಂತರ ವಿಧಾನಸಭೆ ಚುನಾವಣೆ ನಡೆಯುತ್ತಿರುವುದು ಗಮನಾರ್ಹ.
ಈ ಕೇಂದ್ರಾಡಳಿತ ಪ್ರದೇಶದ 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 18 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಪಾಂಪೋರ್, ತ್ರಾಲ್, ಪುಲ್ವಾಮಾ, ರಾಜ್‌ಪೋರಾ, ಜೈನಪೋರಾ, ಶೋಪಿಯಾನ್, ಡಿ.ಎಚ್. ಪೋರಾ, ಕುಲ್ಗಾಮ್, ದೇವ್ಸರ್, ದೂರು, ಕೋಕರ್ನಾಗ್ (ಎಸ್ಟಿ), ಅನಂತನಾಗ್ ಪಶ್ಚಿಮ, ಅನಂತನಾಗ್, ಶ್ರೀಗುಫ್ವಾರಾ-ಬಿಜ್ಬೆಹರಾ, ಶಾಂಗಾಸ್-ಅನಂತ್ನಾಗ್ ಪೂರ್ವ, ಪಹಲ್ಗಾಮ್, ಇಂದರ್ವಾಲ್, ಕಿಶ್ತ್ವಾರ್, ಪಾದೆರ್-ನಾಗಸೇನಿ, ಭದೇರ್ವಾ, ದೋಡಾ, ದೋಡಾ ಪಶ್ಚಿಮ, ರಾಂಬನ್ ಮತ್ತು ಬನಿಹಾಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಹರಿಯಾಣದ ಕುರುಕ್ಷೇತ್ರದಲ್ಲಿರುವ ಥೀಮ್ ಪಾರ್ಕ್‌ನಲ್ಲಿ ಪ್ರಧಾನಿ ಮೋದಿಯವರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಹರಿಯಾಣದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನೈಬ್ ಸಿಂಗ್ ಸೈನಿ ಕುರುಕ್ಷೇತ್ರದ ಲಾಡ್ವಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಗಮನಾರ್ಹ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಈ ರ್ರ್ಯಾಲಿ ಅತ್ಯಂತ ಮಹತ್ವದ್ದಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *