Breaking News

ನೆಲಮಂಗಲ ಬಳಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಎನ್ನುವ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಅಧಿಕೃತ ಉತ್ತರ ಸಿಗುವ ಸಾಧ್ಯತೆ ಇದೆ. ಡಾಬಸ್‌ಪೇಟೆ, ಕನಕಪುರ, ಮಾಗಡಿ, ದೊಡ್ಡಬಳ್ಳಾಪುರ, ಕನಕಪುರ, ವಸಂತನರಸಾಪುರ, ನೆಲಮಂಗಲ ಸೇರಿದಂತೆ ಹಲವು ಸ್ಥಳಗಳ ಹೆಸರು ಕೇಳಿಬಂದಿತ್ತು.
ಇದೀಗ ನೆಲಮಂಗಲದ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಬಹುತೇಕ ಖಚಿತವಾಗಿದೆ.
ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಬಂಧ 11ನೇ ಸುತ್ತಿನ ಸಭೆ ನಡೆದಿದೆ. ಐಡೆಕ್‌ ಸಂಸ್ಥೆ ವಿಮಾನ ನಿಲ್ದಾಣಕ್ಕೆ 7 ಸ್ಥಳಗಳನ್ನು ಗುರುತಿಸಿದ್ದು, ಇದರಲ್ಲಿ ನೆಲಮಂಗಲ ಬಳಿ ಗುರುತಿಸಿರುವ ಸ್ಥಳ ಸೂಕ್ತ ಎನ್ನುವ ತೀರ್ಮಾನಕ್ಕೆ ಬರಲಾಗಿದೆ ಎಂದು ವಿಕ ವರದಿಮಾಡಿದೆ.
ನಾಡಪ್ರಭು ಕೆಂಪೇಗೌಡ ವಿಮಾನ ನಿಲ್ದಾಣದ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತಿದ್ದು, ಇನ್ನೊಂದು ದಶಕದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಗುರಿ ಹೊಂದಲಾಗಿದೆ. ದೆಹಲಿ, ಮುಂಬೈ ಬಳಿಕ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಲಿರುವ ನಗರ ಎನ್ನುವ ಹೆಗ್ಗಳಿಕೆ ಬೆಂಗಳೂರು ಪಾತ್ರವಾಗಲಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *