ಬೆಂಗಳೂರು: ಮುಂದಿನ ನಾಲ್ಕು ವಾರಗಳಲ್ಲಿ ಕರ್ನಾಟಕದ ಎಲ್ಲಾ ಭಾಗಗಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ, ಮಲೆನಾಡು ಮತ್ತು ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ.
ಐಎಂಡಿ ಮೂಲಗಳ ಪ್ರಕಾರ ಜೂನ್ 1ರಿಂದ ಆಗಸ್ಟ್ 16, 2024 ರವರೆಗೆ ರಾಜ್ಯದಲ್ಲಿ ಸಾಮಾನ್ಯ 580.2 ಎಂಎಂಗೆ ಹೋಲಿಸಿದರೆ 700.6 ಎಂಎಂ ಮಳೆಯಾಗಿದೆ. ರಾಜ್ಯದ ಸಿರುಗುಪ್ಪ, ದೇವದುರ್ಗ, ಔರಾದ್, ಬೀದರ್, ಕಮಲನಗರ, ಹುಬ್ಬಳ್ಳಿ, ಶಹಾಪುರ, ಯಾದಗಿರಿ ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, ಮುಂದಿನ ವಾರಗಳಲ್ಲಿ ಈ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

