ಬಾಗಲಕೋಟೆ: ದೇವಸ್ಥಾನ ಪ್ರವೇಶಿದ್ದಕ್ಕೆ ದಲಿತ ಯುವಕನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದಿದೆ. ದ್ಯಾಮವ್ವನ ಗುಡಿ ಪ್ರವೇಶಿದ್ದಕ್ಕೆ ಸವರ್ಣೀಯರು ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕ ಅರ್ಜುನ್ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೇ ದೇವಸ್ಥಾನದ ಮುಂದಿನ ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

