Breaking News

ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಕೇಂದ್ರ ಜಲಶಕ್ತಿ ತಂಡ

ವಿಜಯಪುರ: ಕೇಂದ್ರ ಜಲ ಶಕ್ತಿ ತಂಡದ ನೋಡಲ್ ಅಧಿಕಾರಿ ವಿಕಾಸ್ ಡೋಗ್ರಾ ಹಾಗೂ ಅನಾಮಿಕ ಐಚ್ ತಾಂತ್ರಿಕ ಅಧಿಕಾರಿಗಳು ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ವಿಜಯಪುರ ತಾಲ್ಲೂಕಿನ ಭೂತನಾಳ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ, ತಿಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರು ಪೂರೈಕೆಯ ನಳಗಳ ಪರಿಶೀಲನೆ, ಡೋಮನಾಳ ಗ್ರಾಮದ ಗುಡ್ಡದ ಅರಣ್ಯ ವಲಯದ ಕಾಮಗಾರಿಗಳನ್ನು ಪರಿಶೀಲಿಸಿದರು.
ಇಂಡಿ ತಾಲ್ಲೂಕಿನ ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸನಾಳ ಗ್ರಾಮದ ಬೋರ್‌ವೆಲ್‌ ರಿಚಾರ್ಜ್ ಫಿಟ್ ಕಾಮಗಾರಿ ಪರಿಶೀಲಿಸಿದರು. ರಿಚಾರ್ಜ್ ಫಿಟ್ ಕಾಮಗಾರಿಯ ವಿಸ್ತೀರ್ಣ, ಆಯವ್ಯಯ ನಿರ್ವಹಣೆ ಕುರಿತು ತಾಂತ್ರಿಕ ಸಹಾಯಕರೊಂದಿಗೆ ಚರ್ಚಿಸಿದರು. ಕ್ಯಾತನಕೇರಿಯ ಅಮೃತ ಸರೋವರ, ನೀರಿನ ಸಂಗ್ರಹಣೆ, ಸುತ್ತಳತೆ, ಸರೋವರದಿಂದ ಗ್ರಾಮಸ್ಥರಿಗೆ ದೊರೆಯುವ ಅನುಕೂಲತೆಗಳ ಕುರಿತು ಮಾಹಿತಿ ಪಡೆದರು.
ಇಂಡಿ ತಾಲ್ಲೂಕಿನ ಝಳಕಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅನುಷ್ಠಾನಗೊಂಡ ಅಬ್ಸರ್ವೇಷನ್ ಬೋರ್‌ವೆಲ್ ಕಾಮಗಾರಿ, ನೀರಿನ ಮಟ್ಟ ಸೇರಿದಂತೆ ವಿವಿಧ ಮಾಹಿತಿ ಪಡೆದರು. ಮಳೆ ನೀರು ಕೊಯ್ಲು ಕಾಮಗಾರಿ ವೀಕ್ಷಿಸಿದರು.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *