Breaking News

ಮನೆ ಮಾಲೀಕರನ್ನು ಕಟ್ಟಿಹಾಕಿ ದುಷ್ಕರ್ಮಿಗಳಿಂದ ಕಳ್ಳತನ

ರಾಯಚೂರು: ಇಲ್ಲಿನ ಲಕ್ಷ್ಮೀ ನರಸಿಂಹ ಬಡಾವಣೆಯಲ್ಲಿ ಭಾನುವಾರ ಬೆಳಗಿನ ಜಾವ ಮನೆ ಬಾಗಿಲು ಮುರಿದು ಒಳ ನುಗ್ಗಿದ ದರೋಡೆಕೋರರು ಮನೆ ಮಾಲೀಕರನ್ನು ಕಟ್ಟಿಹಾಕಿ 22 ತೊಲೆ ಬಂಗಾರ, 2 ಕೆ.ಜಿ ಬೆಳ್ಳಿ ಹಾಗೂ ₹2 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಕಪ್ಪು ಬಣ್ಣದ ಬಟ್ಟೆ ಧರಿಸಿದ ದರೋಡೆಕೋರರ ಗ್ಯಾಂಗ್ ಮನೆಗೆ ನುಗ್ಗುವ ಮುಂಚೆ ಬಡಾವಣೆಯ ಅಕ್ಕಪಕ್ಕದ ಮನೆಗಳಿಗೆ ಹೊರಗೆ ಬೀಗ ಹಾಕಿದ್ದಾರೆ.
ಸುತ್ತಮುತ್ತಲಿನ ಬೀದಿ ದೀಪಗಳನ್ನು ಆಫ್ ಮಾಡಿದ್ದಾರೆ ನಂತರ ಬಸನಗೌಡ ಅವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ದರೋಡೆ ಮಾಡಿದ್ದಾರೆ. ಕಳ್ಳರ ಚಲನವಲನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದರೋಡೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಶ್ಚಿಮ ಪೊಲೀಸ್ ಠಾಣೆ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.
ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದು, ಬೆಳ್ಳಂಬೆಳಿಗ್ಗೆ ನಡೆದ ಈ ಘಟನೆಯಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *