Breaking News

ಕಡ್ಡಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ಏರಿಕೆ

ಬ್ಯಾಡಗಿ: ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆಗೆ 15,095 ಚೀಲ (3,773 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಏರಿಕೆಯಾಗಿದೆ.
ಡಬ್ಬಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ಇಳಿಕೆಯಾಗಿದ್ದು, ಕಡ್ಡಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ತುಸು ಏರಿಕೆ ಕಂಡಿದೆ.
ಮಂಗಳವಾರ ಮತ್ತು ಶುಕ್ರವಾರ ವಹಿವಾಟು ಜೋರಾಗಿದ್ದು, ಕೋಲ್ಡ್ ಸ್ಟೋರೇಜ್‌ಗಳಲ್ಲಿ ಸಂಗ್ರಹವಿರುವ ಮೆಣಸಿನಕಾಯಿ ಮಾರಾಟ ಮಾತ್ರ ನಡೆಯುತ್ತಿದೆ. ಕಳೆದ ಮಂಗಳವಾರ 11,097 ಚೀಲ (2,774 ಕ್ವಿಂಟಲ್‌) ಆವಕವಾಗಿತ್ತು.
ಶುಕ್ರವಾರ 521 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 56 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. 110 ಚೀಲ ಡಬ್ಬಿ ಮೆಣಸಿನಕಾಯಿ ₹ 30,500, 31 ಚೀಲ ಕಡ್ಡಿ ಮೆಣಸಿನಕಾಯಿ ₹ 28,000 ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹ 16,859 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿವೆ.
ಡಬ್ಬಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ₹ 6 ಸಾವಿರ ಇಳಿಕೆಯಾಗಿದ್ದರೆ, ಕಡ್ಡಿ ಮೆಣಸಿನಕಾಯಿ ₹ 2 ಸಾವಿರ ಏರಿಕೆ ಕಂಡಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹ 25,009, ಬ್ಯಾಡಗಿ ಕಡ್ಡಿ ₹ 23,509 ಹಾಗೂ ಗುಂಟೂರ ತಳಿ ₹ 13,009 ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ 93 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *