Breaking News

ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ: ಗಂಭೀರ ಗಾಯ

ಹುಬ್ಬಳ್ಳಿ: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

ಶಾರದಾ ಭವನ ಕಡೆಯಿಂದ ದೇಸಾಯಿ ಬ್ರಿಡ್ಜ್ ಕಡೆಗೆ ಹೊರಟಿದ್ದ ಕಾರು ಬಾಳಿಗಾ ಕ್ರಾಸ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದು ನಡು ರಸ್ತೆಯಲ್ಲಿಯೇ ಪಲ್ಟಿಯಾಗಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದ ಓರ್ವನಿಗೆ ಗಾಯವಾಗಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಇನ್ಸ್‌ಪೆಕ್ಟರ್ ಡಿಸೋಜಾ ಭೇಟಿ ನೀಡಿ ನಡುರಸ್ತೆಯಲ್ಲಿಯೇ ಬಿದ್ದಿದ್ದ ಕಾರನ್ನು ತೆರವುಗೊಳಿಸಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *