Breaking News

ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಿ: ಸಂಸದ ಜಗದೀಶ ಶೆಟ್ಟರ್‌

ಬೆಳಗಾವಿ: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ ಎಂದು ಸಂಸದ ಜಗದೀಶ ಶೆಟ್ಟರ್‌ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.
ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ.
ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *