Breaking News

ದೇಶದ ಮೊದಲ ವಂದೇ ಭಾರತ್ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ

ಅಹ್ಮದಾಬಾದ್‌: ಎರಡು ನಗರಗಳ ನಡುವೆ ಸಂಪರ್ಕ ಸಾಧಿಸುವ ದೇಶದ ಮೊದಲ ವಂದೇ ಭಾರತ್‌ ಮೆಟ್ರೋ ರೈಲಿನ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆ.16) ಚಾಲನೆ ನೀಡಲಿದ್ದಾರೆ. ಅದು ಗುಜರಾತ್‌ನ ಭುಜ್‌ನಿಂದ ಅಹ್ಮದಾಬಾದ್‌ಗೆ ಸಂಚರಿಸಲಿದೆ.
ಟಿಕೆಟ್‌ಗಳನ್ನು ಕಾಯ್ದಿರಿಸದೆ ಜನರಿಗೆ ಈ ರೈಲಿನಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗುತ್ತದೆ.
ಅದು ವಾರದ 6 ದಿನಗಳಲ್ಲಿ ವಂದೇ ಭಾರತ್‌ ಮೆಟ್ರೋ ಸಂಚರಿಸಲಿದೆ ಎಂದು ಪಶ್ಚಿಮ ರೈಲ್ವೇಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರದೀಪ್‌ ಶರ್ಮಾ ತಿಳಿಸಿದ್ದಾರೆ. 5 ಗಂಟೆ 45 ನಿಮಿಷಗಳ ಅವಧಿಯಲ್ಲಿ 360 ಕಿ.ಮೀ.ದೂರವನ್ನು ಅದು ಕ್ರಮಿಸಲಿದೆ ಎಂದು ಹೇಳಿದ್ದಾರೆ. ಈ ರೈಲು ತನ್ನ ಮಾರ್ಗದಲ್ಲಿ 9 ನಿಲುಗಡೆಗಳನ್ನು ಹೊಂದಿದೆ. ಸದ್ಯ 12 ಬೋಗಿಗಳ ಮೆಟ್ರೋ ರೈಲಿಗೆ ಚಾಲನೆ ನೀಡಲು ಚಿಂತಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ 16 ಬೋಗಿಗಳ ರೈಲಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮಾದರಿಯಲ್ಲಿಯೇ ವಂದೇ ಭಾರತ್‌ ಮೆಟ್ರೋವನ್ನು ನಿರ್ಮಿಸಲಾಗಿದೆ ಎಂದು ಪ್ರದೀಪ್‌ ಶರ್ಮಾ ತಿಳಿಸಿದ್ದಾರೆ. ಅದರಲ್ಲಿ ಸ್ವಯಂ ಚಾಲಿತ ಬಾಗಿಲುಗಳು ಇರಲಿವೆ. ಜತೆಗೆ ಕೋಚ್‌ನಲ್ಲಿ 4 ಸ್ವಯಂ ಚಾಲಿತ ಬಾಗಿಲುಗಳನ್ನು ಇರಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೊಬೈಲ್‌ ಚಾರ್ಜ್‌ ಮಾಡುವ ವ್ಯವಸ್ಥೆಯನ್ನೂ ಭಾರತೀಯ ರೈಲ್ವೇ ಕಲ್ಪಿಸಿಕೊಡಲಿದೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *