Breaking News

ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಶಿಕ್ಷಕರಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು: ಮಧು ಬಂಗಾರಪ್ಪ

ಸೊರಬ: ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಶಿಕ್ಷಕರಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ರಂಗ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆತ್ತ ತಂದೆ, ತಾಯಿಗಳ ಸ್ಥಾನದಲ್ಲಿ ಅಕ್ಷರ ಕಲಿಸುವ ಗುರುಗಳನ್ನು ನೋಡುವ ಪರಂಪರೆ ನಮ್ಮದು. ಶಿಕ್ಷಕರ ಅನುಪಸ್ಥಿತಿಯಲ್ಲಿ ಸಮಾಜವನ್ನು ನೆನಪಿಸಿಕೊಳ್ಳಲು ಸಾಧ್ಯವಿಲ್ಲ. ನಿಮ್ಮ ಕರ್ತವ್ಯಕ್ಕೆ ಚ್ಯುತಿ ಬರದಂತೆ ಕಾರ್ಯನಿರ್ವಹಿಸಿ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಪ್ರಜಾಪ್ರಭುತ್ವ ಅಪಾಯದ ಸ್ಥಿತಿ ತಲುಪಲು ಬಿಡದಂತೆ ಎಚ್ಚರ ವಹಿಸಬೇಕಾಗಿದ್ದು, 660 ಕಿ.ಮೀ. ಮಾನವ ಸರಪಳಿ ನಿರ್ಮಿಸುವ‌ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ‌ಜಾಗೃತಿ‌ ಮೂಡಿಸಲಾಗಿದೆ. ರಾಷ್ಟ್ರಗೀತೆಯಷ್ಟೇ ಸಂವಿಧಾನವೂ ಮುಖ್ಯ. ಬಡವ, ಬಲ್ಲಿದವರು ನೆಮ್ಮದಿಯಿಂದ ಬದುಕಬೇಕಾದರೆ ಸಂವಿಧಾನ ಉಳಿಸುವುದು ಮುಖ್ಯ. ದೇಶದಲ್ಲಿ ರಾಜಕೀಯ ವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ಸರಿಪಡಿಸುವ ಜೊತೆಗೆ ಮುಂದಿನ ಪೀಳಿಗೆಗೆ ಸಂವಿಧಾನದ ಮಹತ್ವ ತಿಳಿಸುವ ಉದ್ದೇಶದಿಂದ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಗುತ್ತಿದೆ ಎಂದು ತಿಳಿಸಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *