Breaking News

ಪಟಾಕಿ ಹಚ್ಚುವ ವಿಚಾರಕ್ಕೆ ಯುವಕರಲ್ಲಿ ಮಾರಾಮಾರಿ

ಹುಬ್ಬಳ್ಳಿ: ಎರಡು ಕುಟುಂಬಗಳ ನಡುವೆಗಣಪತಿ ವಿಸರ್ಜನೆ ವೇಳೆಯಲ್ಲಿ ಪಟಾಕಿ ಹಚ್ಚುವ ವಿಚಾರಕ್ಕೆ ಕಲ್ಲು ಹಾಗೂ ಕಟ್ಟಿಗೆಗಳಿಂದ ಮಾರಾಮಾರಿ ಸಂಭವಿಸಿದ ಘಟನೆ ರವಿವಾರ ರಾತ್ರಿ ಕಲಘಟಗಿ ತಾಲ್ಲೂಕಿನಲ್ಲಿ ನಡೆದಿದೆ.

ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಸು ಹಾಗೂ ಸಂಜು ಎಂಬುವರ ಮೇಲೆ ಅದೇ ಗ್ರಾಮದ ಶೇಕಪ್ಪ ಹೊನ್ನಿಹಳ್ಳಿ. ಕಲ್ಮಶ, ಮಂಜಪ್ಪ, ನಾಗಪ್ಪ, ಪರಶು, ಹಾಗೂ ಇನ್ನಿತರರು ಸೇರಿ ಕಲ್ಲು ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ.

ಇದರ ಪರಿಣಾಮ ಬಸು ಹಾಗೂ ಸಂಜು ತಲೆಗೆ ಗಂಭೀರವಾಗಿ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಇಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *