Breaking News

ಮುನಿರತ್ನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ: ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಕೇಸ್ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಕಂಪ್ಲೇಂಟ್ ಕೊಟ್ಟ ಚೆಲುವರಾಜ ಇದೀಗ ಯೂ ಟರ್ನ್ ಹೊಡೆದಿದ್ದು, ಈ ಪ್ರಕರಣ ತಿರುವು ಪಡೆದಿದೆ ಶಾಸಕ ಪ್ರಸಾದ ಅಬ್ಬಯ್ಯ ಎಂದರು.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಕೇಸ್ ಪ್ರಕರಣಕ್ಕೆ ಸಂಭಂದಿಸಿದಂತೆ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರ ಚೆಲುವರಾಯನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಮುನಿರತ್ನ ಆಡಿಯೋವನ್ನು ಈಗಾಗಲೇ ರಾಜ್ಯದ ಜನತೆ ಕೇಳಿದೆ. ಅದನ್ನು ಮರೆ ಮಾಚುವ ಸಲುವಾಗಿ ಮತ್ತೊಂದು ಆಡಿಯೋ ಲಾಂಚ್ ಮಾಡಲಾಗಿದೆ.

ಈ ಧ್ವನಿಯನ್ನು ಈಗಾಗಲೇ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸತ್ಯ ಹೊರ ಬರುತ್ತೆ, ಆಗ ಮುನಿರತ್ನನನ್ನು ಗಡಿಪಾರು ಮಾಡಲು ನಾವು ಕೂಡಾ ಒತ್ತಾಯ ಮಾಡ್ತೀವಿ, ಅಂತಾ ಶಾಸಕ ಪ್ರಸಾದ ಅಬ್ಬಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *