Breaking News

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಕುಸಿತ

ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ವಾತಾವರಣ ಹಲವು ಭಾಗಗಳಲ್ಲಿ ಶುರುವಾಗಿದೆ. ಸಾಧಾರಣ ಮಳೆ ಅಲ್ಲಲ್ಲಿ ಆಗಿರುವುದು ಬಿಟ್ಟರೆ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದೆ. ಉತ್ತರ ಕರ್ನಾಟಕದ ವಿಜಯಪುರ, ಬೀದರ್‌, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದು ಬೆಳ್ಳಂಬೆಳಿಗ್ಗೆ ಚಳಿ ವಾತಾವರಣವಿತ್ತು.
ಹಾಸನ, ಮಂಡ್ಯ, ದಾವಣಗೆರೆ ಸಹಿತ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ ಬಿರು ಬಿಸಿಲಿನ ವಾತಾವರಣ ಮುಂದುವರಿದಿದೆ. ಬೆಂಗಳೂರಿನಲ್ಲೂ ಬಿಸಿಲಿನ ಸನ್ನಿವೇಶವೂ ಇದೆ. ಸೋಮವಾರದಂದು ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *