Breaking News

ಸರ್ಕಾರದ ವಿರುದ್ಧ ಕಿಡಿಕಾರಿದ ಶಾಸಕ ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟಿಕರಣ ಮಿತಿಮೀರಿದೆ. ಸರ್ಕಾರದ ತುಷ್ಟಿಕರಣ ನೀತಿಯಿಂದಾಗಿ ರಾಜ್ಯದಲ್ಲಿ ಹೆಚ್ಚು ಗಲಭೆ ಗಲಾಟೆಗಳು ನಡೆಯುತ್ತಿವೆ ಎಂದು ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ಕಿಡಿ ಕಾರಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತುಷ್ಟಿಕರಣದ ನೀತಿಯಿಂದ ಸರ್ಕಾರವೇ ಸಮಸ್ಯೆಗಳನ್ನು ತಂದೊಡ್ಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಸಂದರ್ಭದಲ್ಲಿ ಗಲಭೆಗಳು ನಡೆಯುತ್ತವೆ ಎಂದರು.

ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಮೆರವಣಿಗೆ ವಿಷಯಕ್ಕೆ ಸವಾಲ್ ಹಾಕಿದ್ದು ತಪ್ಪು. ಹೀಗೆ ಸವಾಲು ಹಾಕಿದರೇ ಎದುರಿನವರನ್ನು ರೊಚ್ಚಿಗೆಳಿಸುತ್ತದೇ. ಇದು ಗಲಭೆ, ಗಲಾಟೆಗಳಿಗೆ ಕಾರಣವಾಗುತ್ತವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೇ ಇಂತಹ ಘಟನೆ ನಡೆಯೋದಿಲ್ಲ. ಸರ್ಕಾರ ಅಲ್ಪಸಂಖ್ಯಾತರ ತುಷ್ಟಿಕರಣ ನಿಲ್ಲಿಸಬೇಕು ಎಂದು ಅವರು ಸೂಚನೆ ನೀಡಿದರು.

Share News

About Shaikh BigTv

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *