ಮುದ್ದೇಬಿಹಾಳ: ತಾಲೂಕಿನ ಚಟ್ಟಿಹಾಳ ಗ್ರಾಮದ ಯುವತಿ ಬಾಲವ್ವ ಕಮರಿ ಕೃಷ್ಣಾ ನದಿಗೆ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ ಎಂದು ವರದಿ ತಿಳಿಸಿದೆ.
ಆಕೆಯ ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ದಳದ ತಂಡ ಹಾಗೂ ನುರಿತ ಈಜುಗಾರರೊಂದಿಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಸೆಪ್ಟೆಂಬರ್ 14 ರಂದೇ ಯುವತಿ ನದಿಗೆ ಹಾರಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

