ಕಲಬುರಗಿ: ನಾಳೆ ನಡೆಯುತ್ತಿರುವ ಸಚಿವ ಸಂಪುಟ ಸಭೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ, ರಾಜ್ಯದ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ. ಆದರೆ ನಮ್ಮ ಭಾಗದ ದೀರ್ಘಕಾಲಿಕ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು. ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು ಎಂದು ಹೇಳಿದರು.
ನಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ದು, ಅದಕ್ಕೆ ಬದ್ಧವಾಗಿದ್ದೇವೆ ಎಂದರು, ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

