Breaking News

ಹಳೆ ವೈಷಮ್ಯದ ಹಿನ್ನಲೆ ಎರಡು ಗುಂಪುಗಳ ನಡುವೆ ಗಲಾಟೆ: ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ

ರಾಯಚೂರು: ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಅಂತ್ಯಸಂಸ್ಕಾರದ ವೇಳೆಯಲ್ಲೇ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಕೈಕೈ ಮಿಲಾಯಿಸಿ ಎರಡು ಗುಂಪುಗಳು ಬಡಿದಾಡಿಕೊಂಡ ಪರಿಣಾಮ, ಓರ್ವ ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯಚೂರು ತಾಲ್ಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ 2 ಗುಂಪುಗಳ ನಡುವೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಭೀಮೇಶ ನಾಯಕ(38) ಎಂಬುವರು ಸಾವನ್ನಪ್ಪಿದ್ದಾರೆ.
ರಾಮಲಮ್ಮ, ಅಲಾರಿ ನಾಯಕ್, ದೋಳಯ್ಯ ಸೇರಿದಂತೆ 8 ಮಂದಿ ಹೊಡೆದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮಿರ್ಜಾಪುರ ಗ್ರಾಮದ ಕರಿಯಮ್ಮ ಎಂಬುವರು ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲಾಗಿತ್ತು. ಈ ವೇಳೆ ಆಗಮಿಸಿದ್ದ ದೊಳಯ್ಯ ಹಾಗೂ ಗೋವಿಂದ ಎಂಬುವರು ಕುಟುಂಬಸ್ಥರ ಮಧ್ಯೆ ಜಗಳವಾಗಿದೆ. ಇದು ಗಲಾಟೆಗೆ ತಿರುಗಿ, ಕಟ್ಟಿಗೆ, ಕುಡುಗೋಲಿನಿಂದ ಹೊಡೆದಾಡಿಕೊಂಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *