Breaking News

ಸೆ.17 ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ: ನಿಷೇಧಾಜ್ಞೆ ಜಾರಿ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸೆಪ್ಟೆಂಬರ್ 17ರ ಮಂಗಳವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಕಲಬುರಗಿ ಮಿನಿ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ, ನಗರ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಸಿದ್ದರಾಮಯ್ಯ ಸೋಮವಾರ ಸಂಜೆಯೇ ಕಲಬುರಗಿ ನಗರಕ್ಕೆ ಆಗಮಿಸಿ, ವಾಸ್ತವ್ಯ ಹೂಡಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸಂಪುಟ ಸಭೆಯಲ್ಲಿ ಯಾವ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಾದು ನೋಡಬೇಕಿದೆ.
ಮಂಗಳವಾರ ಕಲಬುರಗಿ ನಗರದ ಮಿನಿ ವಿಧಾನಸೌಧ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ 19ನೇ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಿ.ಎನ್.ಎಸ್.ಎಸ್ ಕಾಯ್ದೆ 1973ರ ಕಲಂ 163 ಅನ್ವಯ ಜಿಲ್ಲಾಧಿಕಾರಿಗಳ ಕಛೇರಿಯ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಈ ಕುರಿತು ಉಪ ಪೊಲೀಸ್ ಆಯುಕ್ತ (ಕಾ&ಸು) ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕಲಬುರಗಿ ನಗರ ಆದೇಶವನ್ನು ಹೊಡಿಸಿದ್ದಾರೆ. ಪೊಲೀಸ್ ಆಯುಕ್ತರು ಹಾಗೂ ದಂಡಾಧಿಕಾರಿಗಳು, ಕಲಬುರಗಿ ನಗರ ಅವರ ನಡಾವಳಿಗಳ ಅನ್ವಯ ಈ ಆದೇಶವನ್ನು ಹೊರಡಿಸಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆಯ ತನಕ ಆದೇಶ ಜಾರಿಯಲ್ಲಿರುತ್ತದೆ.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್. ಡಿ. ಕಲಬುರಗಿ ನಗರದಲ್ಲಿ ಸೋಮವಾರ ಅಧಿಕಾರಿ ಹಾಗೂ ಸಿಬ್ಬಂದಿಗಳ ರೂಲ್ ಕಾಲ್ ತೆಗೆದುಕೊಂಡರು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಬಂದೋಬಸ್ತ್ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *