Breaking News

ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಹಾಗೂ ಕೈಗಾರಿಕಾ ನೀತಿ ಜಾರಿ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಹತ್ತು ವರ್ಷಗಳ ನಂತರ ಸೆ. 17 ರಂದು ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಪ್ರಮುಖ ಕಾರ್ಯಗಳಿಗೆ ಆದ್ಯತೆ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಸೋಮವಾರ (ಸೆ.16) ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಕ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಮುಖವಾಗಿ ಕಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಹಾಗೂ ಪ್ರತ್ಯೇಕ ಕೈಗಾರಿಕಾ ನೀತಿ ಜಾರಿ ಜತೆಗೆ ಕಕ ಭಾಗದ ಖಾಲಿ ಹುದ್ದೆಗಳ ಭರ್ತಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.
ನಾವು ಎಲ್ಲಾ ನಿರೀಕ್ಷೆಗಳನ್ನು ಈಡೇರಿಸಲಾಗದು ಆದರೆ ಅವುಗಳಲ್ಲಿ ಪ್ರಮುಖವಾದ ವಿಷಯಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು. ಕಕ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಿದ್ದು, ಇದೇ ಕಾರಣಕ್ಕೆ 371 ಜಾರಿ ತರಲಾಗಿದೆ. ಬಿಜೆಪಿಯವರು ಬೇಡಿಕೆಯನ್ನು ತಿರಸ್ಕರಿಸಿದ್ದರು. ಆದರೆ ಡಾ. ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಪ್ರಯತ್ನದಿಂದ ಸಾಕಾರಗೊಂಡಿತು ಎಂದು ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *