Breaking News

ಗೃಹಲಕ್ಷ್ಮಿ ಹಣ ನಿತ್ಯ ಸತ್ಯ ನಿರಂತರ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ, ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಅವರು ಸ್ಪಷ್ಟಪಡಿಸಿದರು.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *