Breaking News

1685 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಯನ್ನು ಸ್ಮಾರ್ಟ್​​ಸಿಟಿಯಾಗಿಸಲು ಚಿಂತನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಬುರಗಿ: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್​ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್​​ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟನಾ ಹಂತದಲ್ಲಿದೆ ಇಂದಿರಾ ಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಇಂದಿರಾಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಿದ್ದೇವೆ. ಆ ಮೂಲಕ ಕಲಬುರಗಿಯನ್ನು ರೀಜನಲ್ ಹೆಲ್ತ್ ಹಬ್ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಭಾಗದ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು 2023-24 ಅನ್ನು ಇಯರ್ ಆಫ್ ಎಜುಕೇಷನ್ ಎಂದು ಘೋಷಣೆ ಮಾಡಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಕ್ಷರ ಅವಿಷ್ಕಾರ ಯೋಜನೆ ಜಾರಿಗೊಳಿಸಿದ್ದೇವೆ ಎಂದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *