Breaking News

1000 ವರ್ಷಗಳ ಅಭಿವೃದ್ಧಿಗಾಗಿ ಭಾರತ ಭದ್ರಬುನಾದಿ ಸೃಷ್ಟಿ: ಪ್ರಧಾನಿ ಮೋದಿ

ಗಾಂಧಿನಗರ: ದೇಶದ ಕ್ಷಿಪ್ರ ಪ್ರಗತಿಗಾಗಿ ತಮ್ಮ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಪ್ರತಿಯೊಂದು ವಲಯ ಹಾಗೂ ಅಂಶಗಳಿಗೂ ಸ್ಪಂದಿಸಲು ಯತ್ನಿಸಿದ್ದೇವೆ. ನಮ್ಮ ಸರ್ಕಾರದ ಆದ್ಯತೆಗಳು, ವೇಗ ಹಾಗೂ ಪ್ರಮಾಣವನ್ನು ನೀವು ಗಮನಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂದಿನ 1000 ವರ್ಷಗಳ ಅಭಿವೃದ್ಧಿಗಾಗಿ ಭಾರತ ಬುನಾದಿಯನ್ನು ಸೃಷ್ಟಿಸುತ್ತಿದೆ. ಮೊದಲ ಸ್ಥಾನಕ್ಕೇರುವುದಷ್ಟೇ ನಮ್ಮ ಆದ್ಯತೆಯಲ್ಲ, ಆ ಪಟ್ಟವನ್ನು ಉಳಿಸಿಕೊಳ್ಳುವುದು ಕೂಡ ಆಗಿದೆ. ಅಯೋಧ್ಯೆ ಹಾಗೂ ಇತರೆ 16 ನಗರಳನ್ನು ಮಾದರಿ ಸೌರನಗರ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.
4ನೇ ಆವೃತ್ತಿಯ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಹಾಗೂ ಎಕ್ಸ್‌ಪೋ (ರೀ-ಇನ್‌ವೆಸ್ಟ್‌ 2024) ಅನ್ನು ಗುಜರಾತಿನ ಗಾಂಧಿನಗರದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೋದಿ ಅವರು, ಭಾರತೀಯರಷ್ಟೆ ಅಲ್ಲ, ಇಡೀ ವಿಶ್ವವೇ ಭಾರತ 21ನೇ ಶತಮಾನದ ಯಶಸ್ವಿ ದೇಶ ಎಂಬ ಭಾವನೆ ಹೊಂದಿದೆ ಎಂದು ತಿಳಿಸಿದರು.
ಹಸಿರು ಭವಿಷ್ಯ ಹಾಗೂ ನೆಟ್‌ ಜೀರೋ ಎಂಬುದು ನಮಗೆ ಅಲಂಕಾರಿಕ ಪದಗಳಲ್ಲ. ಇದು ದೇಶದ ಅಗತ್ಯಗಳು ಅದನ್ನು ಸಾಧಿಸಲು ಬದ್ಧವಾಗಿದ್ದೇವೆ. 21ನೇ ಶತಮಾನವು ಭಾರತದ ಪಾಲಿಗೆ ಸೌರಶಕ್ತಿಯಲ್ಲಿ ಸುವರ್ಣ ಯುಗವಾಗಲಿದೆ ಎಂದು ತಿಳಿಸಿದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *