Breaking News

ಆರು ತಿಂಗಳಲ್ಲಿ ವ್ಯಾಜ್ಯ ವಿಲೇವಾರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ವ್ಯಾಜ್ಯಾ ಬಾಕಿ ಇರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಮುಂದಿನ 6 ತಿಂಗಳಲ್ಲಿ ವ್ಯಾಜ್ಯಗಳನ್ನು ವಿಲೇವಾರಿ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಅರೆ ನ್ಯಾಯಿಕ ಪ್ರಾಧಿಕಾರಗಳಾದ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರುಗಳ ನ್ಯಾಯಾಲಯಗಳಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ದಾಖಲಾಗುವ ಅರ್ಜಿಗಳು ಮತ್ತು ಮೇಲ್ಮನವಿಯಂತಹ ಅರೆ ನ್ಯಾಯಿಕ ಪ್ರಕರಣಗಳಲ್ಲಿ ಶಾಸನಬದ್ಧ ಪ್ರಾಧಿಕಾರಗಳು ಸಂಬಂಧಪಟ್ಟ ಅರ್ಜಿದಾರರು ಪ್ರತಿವಾದಿಗಳು ಹಾಗೂ ಅವಶ್ಯಕ ಇನ್ನಿತರೆ ಸಂಬಂಧಿಸಿದ ಪ್ರಾಧಿಕಾರಿಗಳಿಗೆ ನಿಯಮಾನುಸಾರ ನೋಟೀಸ್ಗಳನ್ನು ಜಾರಿ ಮಾಡಿ, ದಾಖಲೆಗಳನ್ನು ಪಡೆದು ಅಹವಾಲುಗಳನ್ನು ಆಲಿಸುವ ಮೂಲಕ ವಿಚಾರಣೆಯನ್ನು ನಡೆಸಿ ನಂತರ ಕಾನೂನಿನನ್ನಯ ಅರೆ ನ್ಯಾಯಿಕ ಅಧಿಕಾರವನ್ನು ಚಲಾಯಿಸಿ ತೀರ್ಪು/ಆದೇಶಗಳನ್ನು ಹೊರಡಿಸಬೇಕಾಗುತ್ತದೆ.
ಕಂದಾಯ ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿಯನ್ನು ಪರಿಶೀಲಿಸಿದಾಗ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 136(2)ರಡಿ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿರುವ ಮೇಲ್ಮನವಿ ಪ್ರಕರಣಗಳು ಆಡಳಿತಾತ್ಮಕ ಕಾರಣಗಳಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ವಿಲೇವಾರಿಯಾಗದೆ ವಿಳಂಬವಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಲಾಗಿದೆ. ಈ ಬಗ್ಗೆ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಸ್ತ್ರತವಾಗಿ ಚರ್ಚಿಸಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ, ಪ್ರಸ್ತುತ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮೇಲ್ಮನವಿ ಪ್ರಕರಣಗಳನ್ನು ಉಪ ವಿಭಾಗಾಧಿಕಾರಿ ವೃಂದಕ್ಕೆ ಸಮಾನಾಂತರ ವೃಂದದ ಅಧಿಕಾರಿಗಳಿಗೆ ಕಾರ್ಯಹಂಚಿಕೆ ಮಾಡಲು ಉದ್ದೇಶಿಸಲಾಗಿರುತ್ತದೆ ಎಂದು ತಿಳಿಸಲಾಗಿದೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *