ರಾಯಚೂರು: ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ.
ಇಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ರಾಯಚೂರು ನಗರಸಭೆಯನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಕೂಗು ಹಲವು ವರ್ಷಗಳಿಂದಲೇ ಇತ್ತು.
ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸಿ ಕಾರ್ಯಯೋಜನೆ ರೂಪಿಸಲಾಗಿತ್ತು.
ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಕಾಂಗ್ರೆಸ್ ಸರ್ಕಾರ ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

