Breaking News

ಉತ್ತರ ಕರ್ನಾಟಕ ಫಿಲಂ ಚೇಂಬರ್ ನೂತನ ಕಚೇರಿ ಧಾರವಾಡದಲ್ಲಿ ಉದ್ಘಾಟನೆ

ಧಾರವಾಡ: ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಚೇರಿ ಧಾರವಾಡದಲ್ಲಿ ಉದ್ಘಾಟನೆಗೊಂಡಿದೆ.
ಉತ್ತರ ಕರ್ನಾಟಕದಲ್ಲಿ ಸಿನಿಮಾ ನಿರ್ಮಾಣಕ್ಕೆ ಪುಷ್ಠಿ ನೀಡುವ ಸಲುವಾಗಿ ಕೆಲ ವರ್ಷಗಳ ಹಿಂದೆ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಥಾಪಿತವಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್ ಹಲವು ದಶಕಗಳಿಂದಲೂ ಕಾರ್ಯನಿರ್ವಹಿಸುತ್ತಾ ಬಂದಿದೆ.
ಟೈಟಲ್ ರಿಜಿಸ್ಟ್ರೇಷನ್ ಇಂದ ಹಿಡಿದು ಚಿತ್ರರಂಗದ ಸಮ್ಯಸ್ಯೆಗಳಿಗೆ ಸ್ಪಂದಿಸುವುದು ಇನ್ನಿತರೆ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ ಕೆಲವು ಸ್ವಜನ ಪಕ್ಷಪಾತದ ಆರೋಪಗಳು ಸಹ ಇದ್ದು, ವಾಣಿಜ್ಯ ಮಂಡಳಿಗೆ ಪರ್ಯಾಯವಾಗಿ ಬೇರೆ ಕೆಲವು ವಾಣಿಜ್ಯ ಮಂಡಳಿಗಳನ್ನು ಕಟ್ಟಲಾಗಿದೆ. ಉತ್ತರ ಕರ್ನಾಟಕದ ಕಲಾವಿದರಿಗೆ ಮಾನ್ಯತೆ ನೀಡುತ್ತಿಲ್ಲವೆಂದು ಆರೋಪಿಸಿ ಕೆಲ ವರ್ಷಗಳ ಹಿಂದೆ ಉತ್ತರ ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್ ಅನ್ನು ಸ್ಥಾಪಿಸಲಾಯಿತು. ಇದೀಗ ಉತ್ತರ ಕರ್ನಾಟಕ ಫಿಲಂ ಚೇಂಬರ್ ನೂತನ ಕಚೇರಿ ಉದ್ಘಾಟನೆ ಆಗಿದೆ.
ಉತ್ತರ ಕರ್ನಾಟಕದ ಕಲಾವಿದರಿಗೆ, ಸಿನಿಮಾ ನಿರ್ಮಾಪಕರಿಗೆ ಮಾನ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿ, ಉತ್ತರ ಕರ್ನಾಟಕದಲ್ಲಿ ಸಿನಿಮಾ ನಿರ್ಮಾಣಕ್ಕೆ ಪುಷ್ಠಿ ನೀಡುವ ಗುರಿಯೊಂದಿಗೆ ಐದಾರು ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಥಾಪಿಸಲಾಗಿತ್ತು. ಈ ಸಂಘವನ್ನು ನೊಂದಣಿ ಸಹ ಮಾಡಲಾಗಿತ್ತು. ಇದೀಗ ಈ ಛೇಂಬರ್​ನ ಕಚೇರಿಯನ್ನು ಹುಬ್ಬಳ್ಳಿಯಿಂದ ಧಾರವಾಡಕ್ಕೆ ವರ್ಗಾವಣೆ ಮಾಡಲಾಗಿದೆ. ಧಾರವಾಡದ ಓಸ್ವಾಲ್ ಟಾವರ್ ನಲ್ಲಿ ಛೇಂಬರ್​ನ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಗಿದೆ.
ಜನಪ್ರಿಯ ಕಲಾವಿದ ರಾಜು ತಾಳಿಕೋಟಿ ಧಾರವಾಡದಲ್ಲಿ ಕಚೇರಿ ಉದ್ಘಾಟನೆ ಮಾಡಿದರು. ಉತ್ತರ ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷ ಶಂಕರ ಸುಗತೆ ಸೇರಿದಂತೆ ಉತ್ತರ ಕರ್ನಾಟಕದ ಕಲಾವಿದರು, ನಿರ್ದೇಶಕರುಗಳು ಕಚೇರಿ ಉದ್ಘಾಟನೆ ಸಮಯದಲ್ಲಿ ಹಾಜರಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *