Breaking News

ಬಸ್ಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ಹೃದಯಾಘಾತ

ಧಾರವಾಡ: ಸಾರಿಗೆ ಸಂಸ್ಥೆಯ ಬಸ್‌ನಲ್ಲೇ ಪ್ರಯಾಣಿಕನೊಬ್ಬನಿಗೆ ಹೃದಯಾಘಾತವಾಗಿದ್ದು, ಚಾಲಕ ಮತ್ತು ನಿರ್ವಾಹಕ ನೇರವಾಗಿ ಆ ಬಸ್‌ನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ತಂದ ಘಟನೆ ಧಾರವಾಡದಲ್ಲಿ ನಡೆದಿದೆ.

ದಾಂಡೇಲಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾನಿಕನೊಬ್ಬನಿಗೆ ಹೃದಯಾಘಾತವಾಗಿದೆ. ಈತ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಈ ಬಸ್ ಹತ್ತಿದ್ದ. ಮಾರ್ಗ ಮಧ್ಯೆ ಆತನಿಗೆ ಹೃದಯಾಘಾತವಾಗಿದೆ. ಇದನ್ನು ನೋಡಿದ ಚಾಲಕ ಮತ್ತು ನಿರ್ವಾಹಕ ತಮ್ಮ ಬಸ್‌ನ್ನು ನೇರವಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ತೆಗೆದುಕೊಂಡು ಬಂದು ಆ ಪ್ರಯಾಣಿಕನಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದಾರೆ.

ಆದರೆ, ಆ ಪ್ರಯಾಣಿಕ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾನೆ. ಈ ಪ್ರಯಾಣಿಕ ಯಾವ ಊರಿನವನು? ಎಂಬ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *