Breaking News

ಗಣೇಶ ವಿಸರ್ಜನೆ ವೇಳೆ ಗಲಾಟೆ: ಮೂವರಿಗೆ ಚಾಕು ಇರಿತ

ಬೆಳಗಾವಿ: ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದ್ದು, ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ ಆಗಿದ್ದು, ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಾರೆ.
ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಇವರು ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಾಗಿದ್ದಾರೆ. ಈ ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್​ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಗಾಯಾಳುಗಳಾದ ದರ್ಶನ್​​ ಪಾಟೀಲ್​, ಸತೀಶ್​​ ಪೂಜಾರಿಗೆ ಬಿಮ್ಸ್​​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಣಪತಿ ಮೆರವಣಿಗೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದಾಗ ಕಾಲು ತಾಗಿದೆ, ನಂತರ ಮೆರವಣಿಗೆಯಿಂದ ಹೊರಬಂದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮೂವರಿಗೆ ಚಾಕು ಇರಿತವಾಗಿದೆ. ಗಾಂಜಾ ಮತ್ತಿನಲ್ಲಿ ವೈಯಕ್ತಿಕ ಕಾರಣಕ್ಕೆ ಚಾಕು ಇರಿತ ನಡೆಸಲಾಗಿದೆ ಎಂಬ ಸಂಶಯವಿದೆ. ಇನ್ನು ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ತನಿಖೆಯಿಂದ ವಿಷಯ ಬಯಲಾಗಬೇಕಿದೆ ಎಂದು ಕಮಿಷನರ್​​ ಯಡಾ ಮಾರ್ಟಿನ್ ತಿಳಿಸಿದ್ದಾರೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *