Breaking News

ಟ್ರ್ಯಾಕ್ಟರ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ 7 ಮಂದಿಗೆ ಗಾಯ

ಹುಬ್ಬಳ್ಳಿ: ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಟ್ರ್ಯಾಕ್ಟರ್ ನಲ್ಲಿದ್ದ ಆರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರ್ಯಾಕ್ಟರ್ ನಲ್ಲಿ ಕೂಲಿ ಕಾರ್ಮಿಕರು ಎಂದಿನಂತೆ ಜಮೀನು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಬಂದಿಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಎಸಗಿದ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *