Breaking News

ಕೇಂದ್ರ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದ್ದು ಇದು ಅಸಂಭವ ಎಂದು ಕೇಂದ್ರ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ ಒಂದು ರಾಷ್ಟ್ರ ಒಂದು ಚುನಾವಣೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಏಕಕಾಲಕ್ಕೆ ಚುನಾವಣಾ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವುದು ಚುನಾವಣೆಗೆ ಮುನ್ನ ಮಾಡಿರುವ ಚುನಾವಣಾ ಗಿಮಿಕ್, ಚುನಾವಣೆಗಳು ಬಂದಾಗ ಬಿಜೆಪಿ ಈ ಎಲ್ಲ ವಿಷಯಗಳನ್ನು ಹೇಳುತ್ತಾರೆ. ಇದನ್ನು ದೇಶದ ಜನ ಒಪ್ಪುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *