Breaking News

ಮನೆ ಇಲ್ಲದವರಿಗೆ ವಸತಿ ಭಾಗ್ಯ ಯೋಜನೆ ನೀಡಲು ಮುಂದಾದ ವಕ್ಫ್ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ವಸತಿ ಭಾಗ್ಯ ಎನ್ನುವ ಹೊಸ ಯೋಜನೆಯನ್ನು ಪರಿಚಯಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಈ ಮೂಲಕ ಮನೆ ಇಲ್ಲದ ಬಡವರಿಗೆ ಗುಡ್‌ನ್ಯೂಸ್‌ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ, ಇದೀಗ ರಾಜ್ಯದ ಬಡ ಕುಟುಂಬದವರಿಗೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ.
ಕರ್ನಾಟಕದ ಪ್ರತಿ ತಾಲ್ಲೂಕಿನಲ್ಲಿ ಮನೆ ಇಲ್ಲದಿರುವ ಸಮುದಾದವರಿಗೆ ಮನೆ ನಿರ್ಮಾಣ ಮಾಡುವ ಬಗ್ಗೆ ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ಬಡ ಮುಸ್ಲಿಂ ಸಮುದಾಯದವರಿಗೆ ವಕ್ಫ್ ಮಂಡಳಿಯಿಂದಲೇ ವಸತಿ ಭಾಗ್ಯ ಕಲ್ಪಿಸುವ ಯೋಜನೆ ಪ್ರಸ್ತಾವನೆಯಲ್ಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಖ್ಫ್ ಅದಾಲತ್ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯವನ್ನು ಜಮೀರ್ ಅವರು ಹೇಳಿದ್ದಾರೆ. ನಮ್ಮ ಸಮುದಾಯದಲ್ಲಿ ಅತ್ಯಂತ ಬಡವರಿದ್ದು, ಈ ರೀತಿ ಮನೆ ಇಲ್ಲದವರ ಸಮೀಕ್ಷೆ ನಡೆಸಿ ಅವರಿಗೆ ಕಡಿಮೆ ಬಾಡಿಗೆ ದರದಲ್ಲಿ ನೀಡಲಾಗುವುದು. ಇದರಿಂದ ಮಂಡಳಿ ಗೂ ಆದಾಯ ಬರುವಂತಾಗುತ್ತದೆ, ಸಮುದಾಯಕ್ಕೂ ಒಳಿತಾಗುತ್ತದೆ ಎಂದಿದ್ದಾರೆ.
ಅಲ್ಲದೇ ಮೌಜನ್ ಹಾಗೂ ಇಮಾಮ್‌ಗಳಿಗೆ ಬಾಡಿಗೆ ಆಧಾರದ ಮೇಲೆ ಮನೆ ಕಟ್ಟಿಕೊಡಲು ನಿರ್ಧರಿಸಲಾಗಿದೆ. ರಾಜ್ಯ ವಕ್ಫ್ ಮಂಡಳಿ ಸಮುದಾಯದ ಒಳಿತಿಗೆ ಶ್ರಮಿಸುತ್ತಿದ್ದು ತುರ್ತಾಗಿ ವೈದ್ಯಕೀಯ ನೆರವು ಪಡೆಯಲು ಅನುಕೂಲವಾಗುವಂತೆ ಜಿಲ್ಲೆಗೆ ಒಂದರಂತೆ ತಲಾ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಅಂಬುಲೆನ್ಸ್ ನೀಡಲಾಗುವುದು. ಪ್ರತಿ ತಾಲ್ಲೂಕಿಗೆ ಒಂದರಂತೆ ಫ್ರೀಜರ್ ಸಹ ನೀಡಲಾಗುವುದು ಎಂದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *