ಬೆಂಗಳೂರು: ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿರುವ ಜನರಿಗೆ ಸಿಹಿ ಸುದ್ದಿಯೊಂದನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮುಂದಿನ 5-6 ದಿನವೂ ಹಲವೆಡೆ ಮಳೆ ಬೀಳುವ ಮುನ್ಸೂಚನೆಯನ್ನು ನೀಡಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣವಿರಲಿದ್ದು, ಗುಡುಗು, ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಅಲ್ಲದೆ ಮಂಡ್ಯ, ಮೈಸೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ರಾಮನಗರ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಬೆಂಗಳೂರು ನಗರ, ರಾಯಚೂರು, ಗದಗ, ಕೊಪ್ಪಳ, ಧಾರವಾಡ, ಬೀದರ್, ಚಾಮರಾಜನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಉದ್ಯಾನ ನಗರಿ ಬೆಂಗಳೂರಿನಲ್ಲಿಂದು ಸಾಧಾರಣ ಮಳೆಯಾಗಲಿದ್ದು ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅರ್ಭಟ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

