ಧಾರವಾಡ: ನಗರದ ಕೇಂದ್ರ ಕಾರಾಗೃಹದಲ್ಲಿ ಭದ್ರತೆ, ನಿಗಾ ನಿಟ್ಟಿನಲ್ಲಿ ಸುತ್ತ ನಾಲ್ಕು ವೀಕ್ಷಣಾ ಗೋಪುರ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿ ಶೇ 75ರಷ್ಟು ಮುಗಿದಿದೆ.
ಜೈಲು ಭಾಗದಲ್ಲಿ ಕಣ್ಗಾವಲಿಗೆ ಒಳಭಾಗದಲ್ಲಿ 55 ಹಾಗೂ ಸುತ್ತ(ಹೊರ ವಲಯ) 10 ಒಟ್ಟು 65 ಸಿ.ಸಿ ಟಿವಿ ಕ್ಯಾಮೆರಾಗಳಿವೆ. ಒಂದು ಕೋಟಿ ವೆಚ್ಚದಲ್ಲಿ ಗೋಪುರಗಳು ನಿರ್ಮಾಣವಾಗಲಿವೆ. ಗೋಪುರದ ಎತ್ತರ 30 ಅಡಿ ಕಾಂಪೌಂಡ್ ಸುತ್ತಲಿನ ಚಲನವಲನಗಳ ಮೇಲೆ ನಿಗಾ ಇಡಲು, ಹೊರಗಿನಿಂದ ಜೈಲು ಭಾಗದೊಳಕ್ಕೆ ಯಾರಾದರೂ ಏನಾದರೂ ಎಸೆದರೆ ಪತ್ತೆ ಮಾಡಲು ಅನುಕೂಲವಾಗಲಿದೆ. ಕಾಮಗಾರಿಯನ್ನು ಇನ್ನು ನಾಲ್ಕು ತಿಂಗಳಲ್ಲಿ ಮುಗಿಸುವುದಾಗಿ ಗುತ್ತಿಗೆದಾರ ತಿಳಿಸಿದ್ಧಾರೆ ಎಂದು ಕಾರಾಗೃಹ ಸೂಪರಿಂಟೆಂಡೆಂಟ್ ಪಿ.ಮಹದೇವನಾಯ್ಕ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

