Breaking News

ಅಂಗನವಾಡಿ ಕಾರ್ಯಕರ್ತೆಯರ ವೇತನ ರಹಿತ ರಜೆ

ಕುಂದಗೋಳ : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ವಿಧಾನಸೌಧ ಚಲೋ ಚಳುವಳಿಯನ್ನು ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಹಮ್ಮಿಕೊಂಡಿದ್ದು, ಕುಂದಗೋಳ ತಾಲೂಕಿನ 212 ಕಾರ್ಯಕರ್ತರು ವೇತನ ರಹಿತ ರಜೆ ಪಡೆದು ಚಳುವಳಿಯಲ್ಲಿ ಭಾಗವಹಿಸಿದ್ದಾರೆ.

ಸೇವಾ ನಿವೃತ್ತಿ ಆರ್ಥಿಕ ರಕ್ಷಣೆ, ಗೌರವಧನ, ವೇತನ ಹೆಚ್ಚಳ, ಮತ್ತು ಎಲ್.ಕೆ.ಜಿ ಮತ್ತು ಯು.ಕೆ.ಜಿ ಅಂಗನವಾಡಿಯಲ್ಲೇ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಳುವಳಿಗೆ ಧುಮುಕಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸೇರಿದಂತೆ ಕುಂದಗೋಳ ತಾಲೂಕಿನ 212 ಅಂಗನವಾಡಿ ಬಂದ್ ಆಗಿರುವ ಪರಿಣಾಮ ಅಂಗನವಾಡಿಗೆ ಹಾಜರಾಗುವ 4747 ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ, ಮತ್ತು 6 ತಿಂಗಳಿಂದ 3 ವರ್ಷದ ಮಕ್ಕಳು ಸೌಲಭ್ಯದಿಂದ ವಂಚಿತರಾಗಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *