ಹರಿಯಾಣ: ರಾಜಕೀಯ ಪಕ್ಷಗಳು ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಉಚಿತ ಯೋಜನೆಗಳ ಭರವಸೆ ನೀಡಿದೆ. ಇದನ್ನು ವಿರೋಧಿಸಿತ್ತಿದ್ದ ಬಿಜೆಪಿಯು ಸಹ ಉಚಿತ ಯೋಜನೆಗಳು ಇರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಬಿಜೆಪಿ ಹಿರಿಯ ನಾಯಕ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಇಂದು ಗುರುವಾರ ಹರಿಯಾಣದ ರೋಹ್ತಕ್‌ನಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಇದನ್ನು ಉಚಿತ ಗ್ಯಾರೆಂಟಿಗಳು ಎನ್ನದೇ ಬಿಜೆಪಿ ಭರವಸೆ ಎಂಬ ಹೆಸರಿನಲ್ಲಿ ಭರಪೂರ ಕೊಡುಗೆ ಘೋಷಣೆ ಮಾಡಿದ್ದಾರೆ.
ಪ್ರಣಾಳಿಕೆಯ ಪ್ರಕಾರ, ಹರಿಯಾಣದಲ್ಲಿ ಈ ಬಾರಿಯೂ ಬಿಜೆಪಿ ಗೆಲುವು ಸಾಧಿಸಿದರೆ, ಮಹಿಳೆಯರಿಗೆ ಮಾಸಿಕವಾಗಿ ಲಾಡೋ ಲಕ್ಷ್ಮಿ ಯೋಜನೆ ಹೆಸರಿನಲ್ಲಿ 2100 ರೂಪಾಯಿಗೆ ಸಹಾಯಧನವನ್ನು ನೇರ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಹರ್ ಘರ್ ಗೃಹಿಣಿ ಯೋಜನೆಯಡಿ ಅಡುಗೆ ಅನಿಲವನ್ನು ಕೇವಲ 500 ರೂಪಾಯಿಗೆ ವಿತರಣೆ ಮಾಡಲಾಗುವುದು. ರಾಜ್ಯದ ಗ್ರಾಮೀಣ ಪ್ರದೇಶಗಳು ಮತ್ತು ನಗರದಲ್ಲಿ ಒಟ್ಟು 5 ಲಕ್ಷ ಮನೆಗಳನ್ನು ನಿರ್ಮಿಸಿಕೊಡಲಾಗುವುದು. 02 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸಿ, ನಿರುದ್ಯೋಗ ಹೋಗಲಾಡಿಸಲು ಶ್ರಮಿಸಲಾಗುವುದು ಎಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷವು ಹರಿಯಾಣದಲ್ಲಿ ಮಹಿಳೆಯರಿಗೆ 2000 ರೂಪಾಯಿ ಸಹಾಯಧನ ನೀಡುವುದು ಸೇರಿದಂತೆ ಹಲವು ಉಚಿತ ಭರವಸೆ ಘೋಷಿಸಿದೆ. ಅದೇ ರೀತಿ ಇಂದು ಬೃಹತ್ ಕಾರ್ಯಕ್ರಮದಲ್ಲಿ ಸಚಿವ ಜೆ.ಪಿ ನಡ್ಡಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಉಚಿತ ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





