Breaking News

ಕಪ್ಪತ್ತಗುಡ್ಡ ರಕ್ಷಣೆಗೆ ಬೃಹತ್ ಪ್ರಮಾಣದ ಪಾದಯಾತ್ರೆ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಜನರ ದಶಕಗಳ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ, ಇದರೊಂದಿಗೆ ದಕ್ಷಿಣ‌ ಕಾಶೀ ಎಂದೇ ಕರೆಸಿಕೊಳ್ಳುವ ಕಪ್ಪತ್ತಗುಡ್ಡ ರಕ್ಷಣೆಯ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಹುಬ್ಬಳ್ಳಿಯಿಂದ ಬೃಹತ್ ಪಾದಯಾತ್ರೆ ಆರಂಭವಾಗಿದೆ.
ಗುರುವಾರ ಚೆನ್ನಮ್ಮ ವೃತ್ತದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ.
ಇಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬಣದ ನೇತೃತ್ವದಲ್ಲಿ ಮುಖಂಡತ್ವದಲ್ಲಿ ರಾಜ್ಯ ಸಮಿತಿ ಮತ್ತು ಉತ್ತರ ಕರ್ನಾಟಕ ಹಾಗೂ ಬೆಳಗಾವಿ ವಿಭಾಗದ ಪದಾಧಿಕಾರಿಗಳು, ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ್ದರು. ಎರಡು ಮಹತ್ವದ ಯೋಜನೆಗಳ ಪರವಾಗಿ ಬೃಹತ್ ಪ್ರಮಾಣದ ಪಾದಯಾತ್ರೆ ಆರಂಭವಾಗಿದೆ.
ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಯಲ್ಲಿ ಸರ್ಕಾರಗಳು ವಿಳಂಬ ಮಾಡುತ್ತಿದೆ. ಇವುಗಳ ಅನುಷ್ಠಾನದಿಂದ ಲಕ್ಷಾಂತರ ಜನರಿಗೆ ಸಹಾಯವಾಗುತ್ತಿದೆ. ಹೀಗಿದ್ದರೂ ಸರ್ಕಾರ ಇವುಗಳ ಜಾರಿಗೆ ಮನಸ್ಸು ಮಾಡುತ್ತಿಲ್ಲ. ಇನ್ನೂ ದಕ್ಷಿಣ‌ ಕಾಶೀ ಎಂದೇ ಕರೆಯುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಪ್ಪತಗುಡ್ಡ ಉಳಿಯಬೇಕು ಎಂದು ಕರೆವೇ ರಾಜ್ಯಾಧ್ಯಕ್ಷರು, ಕಾರ್ಯಕರ್ತರ ಆಗ್ರಹಿಸಿದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *