ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸೇವೆಗಳಲ್ಲಿ ಭಾರೀ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟದ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 4 ರಿಂದ ಅನಿರ್ದಿಷ್ಟಾವಧಿ ಹೋರಾಟಕ್ಕೆ ನಿರ್ಧರಿಸಿದೆ.
ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ಆರ್ಡಿಪಿಆರ್ ಇಲಾಖೆಯ ಸುಮಾರು 11 ವೃಂದಗಳು ಸೇರಿ ಬೃಹತ್ ಹೋರಾಟ ನಡೆಸಲಿದ್ದಾರೆ. ಅಧಿಕಾರಿಗಳು ಹಾಗೂ ನೌಕರರ ಸಮಸ್ಯೆಗಳನ್ನು ಸೆಪ್ಟೆಂಬರ್ 30ರೊಳಗೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಇಲ್ಲದಿದ್ದಲ್ಲಿ ಅಕ್ಟೋಬರ್ 4 ರಿಂದ ಅನಿರ್ದಿಷ್ಟಾವಧಿ ಹೋರಾಟ ನಿಶ್ಚಿತ ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ಹಾಗೂ ಇಲಾಖೆಯ ಸಚಿವರು ಈ ಬಗ್ಗೆ ಸ್ಪಂದಿಸದಿದ್ದಲ್ಲಿ ತೀವ್ರ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಡೇಟಾ ಎಂಟ್ರಿ ಆಪರೇಟರ್, ಕರವಸೂಲಿಗಾರರು, ಜವಾನರು, ಸ್ವಚ್ಛತಾಗಾರರು, ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಒಕ್ಕೂಟ ಈ ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

