Breaking News

ಕರ್ನಾಟಕ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ: ಚುನಾವಣಾ ಆಯೋಗ ಘೋಷಣೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.
ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪ ಚುನಾವಣೆ ಎದುರಾಗಿದೆ.
ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣಾ ಆಯೋಗ ಗುರುವಾರ ಉಪ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 28ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು 3 ಅಕ್ಟೋಬರ್ ಕೊನೆಯ ದಿನ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 7 ಕೊನೆಯ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *