ಧಾರವಾಡ: ತಾಲೂಕಾ ಹಂತದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ವಿನಯ್ ಕುಲಕರ್ಣಿ ಅವರು ಚೆನ್ನಮ್ಮನ ಕಿತ್ತೂರಿನ ಪ್ರವಾಸಿ ಮಂದಿರದಲ್ಲಿ ಕೆಡಿಪಿ ಸಭೆ ನಡೆಸಿದರು.
ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ಪಿಡಬ್ಲ್ಯುಡಿ, ಕಂದಾಯ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವಿನಯ್ ಕುಲಕರ್ಣಿ, ಧಾರವಾಡ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಅನೇಕ ರಸ್ತೆಗಳು ಹಾಳಾಗಿದ್ದು ಅವುಗಳ ಸುಧಾರಣೆ, ಸರಿಯಾದ ರೀತಿಯಲ್ಲಿ ಕುಡಿಯುವ ನೀರಿನ ಸೌಕರ್ಯ ಒದಗಿಸುವುದು ಸೇರಿದಂತೆ ಇತ್ಯಾದಿ ಸೂಚನೆಗಳನ್ನು ಅಧಿಕಾರಿಗಳಿಗೆ ಶಾಸಕರು ನೀಡಿದರು.
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಪ್ರಗತಿಯಲ್ಲಿ ಹಿನ್ನಡೆ ಇರುವ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರದ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರುವಂತೆ ಸೂಚನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

