ಕುಂದಗೋಳ: ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ್ದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆ ಮನವಿ ಸಲ್ಲಿಸಿದೆ.
ಕುಂದಗೋಳ ತಾಲೂಕಿನ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಪ್ರವೀಣ್ ಮುದೆಣ್ಣನವರ ನೇತೃತ್ವದಲ್ಲಿ ಜಯ ಕರ್ನಾಟಕ ಸಂಘಟನೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ ವಕ್ತಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಗ್ರೇಡ್- ತಹಶೀಲ್ದಾರ್ ಎಸ್.ಎಚ್.ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಸಂಘಟಕರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

