ಮಂಗಳೂರು: ಗ್ಯಾರಂಟಿ ಯೋಜನೆ ಇನ್ನಷ್ಟು ಹೆಚ್ಚು ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ.
ದ.ಕ. ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ರೇಶನ್ ಕಾರ್ಡ್‌ಗಳ ಆಧಾರದಲ್ಲಿ ಫಲಾನುಭವಿಗಳನ್ನು ಗುರುತಿಸಿ ಗುರಿ ನಿಗದಿಪಡಿಸಲಾಗಿತ್ತು. ದ.ಕ. ಜಿಲ್ಲೆಯಲ್ಲಿ ಹೀಗೆ ಗುರುತಿಸಲಾದ ಒಟ್ಟು 4,03,333 ಮಹಿಳೆಯರಲ್ಲಿ ಶೇ.92ರಷ್ಟು ಮಂದಿಗೆ (3,69,292) 2,000 ರೂ. ತಲುಪುತ್ತಿದೆ. ಶೇ.100ರಷ್ಟು ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ದ.ಕ. ಜಿಲ್ಲೆ ಸಹಿತ ಕೆಲವು ಜಿಲ್ಲೆಗಳಲ್ಲಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಗೃಹಲಕ್ಷ್ಮಿ ಯೋಜನೆ ಮೊತ್ತವನ್ನು ಶೀಘ್ರದಲ್ಲೇ ಖಾತೆಗೆ ಜಮೆ ಮಾಡಲಾಗುವುದು. ವಿವಿಧ ರೀತಿಯ ಸಾಲ ಪಡೆದು ಕೊಂಡವರು ಆದಾಯ ತೆರಿಗೆ ಪಾವತಿ ದಾರರು ಎಂದು ಆನ್‌ಲೈನ್‌ನಲ್ಲಿ ನಮೂದಾಗುತ್ತಿದೆ. ಇದರಿಂದ ಅನೇಕರು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಸರಿಪಡಿಸಲು ಪ್ರಯತ್ನಿಸಲಾಗುವುದು, ಅನ್ನಭಾಗ್ಯ ಯೋಜನೆಯಲ್ಲಿ ಅನೇಕ ಹಿರಿಯ ನಾಗರಿಕರ ಬೆರಳಚ್ಚು ಪಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅಂಥವರ ರೆಟಿನಾ ಸ್ಕ್ಯಾನ್‌ಗೆ ವ್ಯವಸ್ಥೆ ಮಾಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

