Breaking News

ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕಸ್ತೂರಿ ರಂಗನ್‌ ವರದಿ ಜಾರಿಗೆ ಸಮ್ಮತಿ

ಬೆಂಗಳೂರು: ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆ ನಿಟ್ಟಿನಲ್ಲಿ ಕಸ್ತೂರಿ ರಂಗನ್‌ ವರದಿ ಜಾರಿಗೆ ಸಂಬಂಧಿಸಿ ಜನಪ್ರತಿನಿಧಿಗಳ ಸಮ್ಮತಿ ದೊರಕಿದೆ. ಕೆಲವು ಷರತ್ತುಗಳೊಂದಿಗೆ ವರದಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಿ ಪಶ್ಚಿಮ ಘಟ್ಟಗಳ ಶ್ರೇಣಿಯನ್ನು ಉಳಿಸಿಕೊಳ್ಳಬಹುದು ಎನ್ನುವ ಸಲಹೆಯನ್ನೂ ನೀಡಲಾಗಿದೆ.ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎನ್ನುವುದು ಪ್ರಮುಖ ನಿರ್ಣಯ ಈ ಸಂಬಂಧ ಸಚಿವ ಸಂಪುಟ ಉಪಸಮಿತಿಯಲ್ಲಿ ಈ ಕುರಿತು ಚರ್ಚಿಸಿ ಅನುಮತಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್ ,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದರಾದ ಶ್ರೇಯಸ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು. ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರು ಕಸ್ತೂರಿ ರಂಗನ್‌ ವರದಿ ಜಾರಿಗೆ ಸಮ್ಮತಿ ಸೂಚಿಸಿದರು. ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಯನ್ನು ತಾತ್ಕಾಲಿಕ ತಡೆ ಹಿಡಿಯಲು ಕರ್ನಾಟಕ ಸರ್ಕಾರದ ಸಿದ್ಧತೆ, ಸಚಿವ ಸಂಪುಟ ಸಭೆಯಲ್ಲಿ ಶೀಘ್ರ ಚರ್ಚೆನಡೆಸಲಾಯಿತು. ಸಭೆಯ ಬಳಿಕ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು, ಇಂದು ನಡೆದ ಸಭೆಯಲ್ಲಿ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ನಾಳೆ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಈಶ್ವರ ಖಂಡ್ರೆ ಹೇಳಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *