Breaking News

ನೀರು ಪೂರೈಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ: ಪ್ರವೀಣಕುಮಾರ ಶೆಟ್ಟಿ

ನವಲಗುಂದ: ರಾಜ್ಯದ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಆರೋಪಿಸಿದ್ದಾರೆ.

ಕಪ್ಪತಗುಡ್ಡ ರಕ್ಷಣೆ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಗೆ ನರಗುಂದಕ್ಕೆ ಹೋಗುವ ವೇಳೆ ಪಟ್ಟಣದ ರೈತ ಭವನದಲ್ಲಿ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಕುಡಿಯುವ ನೀರಿನ ಯೋಜನೆಗೆ ಸಾವಿರಾರು ಕೋಟಿ ರೂ ಮೀಸಲಿಟ್ಟಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚುನಾವಣೆ ವೇಳೆ ಹೇಳಿದ್ದರು. ಆದರೆ ಈಗ ಅದರ ಬಗ್ಗೆ ಮಾತೇ ಇಲ್ಲ ಎಂದರು. ಮಹದಾಯಿ ಯೋಜನೆಗೆ ಗೋವಾ ಸುಪ್ರೀಂಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದೆ. ಆದರೆ ನಮ್ಮ ರಾಜ್ಯ ಸರ್ಕಾರ ಸರಿಯಾದ ಕಾನೂನು ತಜ್ಞರ ಮುಖಾಂತರ ವಾದ ಮಾಡುತ್ತಿಲ್ಲ. ರಾಜ್ಯದ ಸದಸ್ಯರು ನಿದ್ದೆ ಮಾಡುತ್ತಿದ್ದಾರೆ. ಅವರನ್ನು ಎಚ್ಚರಿಸಲು ಪಾದಯಾತ್ರೆ ಮಾಡುತ್ತಿದ್ದೇವೆ.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *