Breaking News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಮೂಲಕ ಅರ್ಜಿ ಆಹ್ವಾನಿ

ಧಾರವಾಡ: 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್ ವೆಬ್‍ಸೈಟ್ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ ಪ್ರತಿಯನ್ನು ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಅಲ್ಪಸಂಖ್ಯಾತರ ಅರಿವು ಕೇಂದ್ರಗಳಲ್ಲಿ ಅಕ್ಟೋಬರ್ 05, 2024 ರ ಒಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರ ಧಾರವಾಡ-9738287549, ಹುಬ್ಬಳ್ಳಿ – 8867718261, ನವಲಗುಂದ-8746894524, ಕಲಘಟಗಿ:-8951674107, ಕುಂದಗೋಳ-8904661872 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *