Breaking News

ಕೇಂದ್ರ ಸರ್ಕಾರದ ನೆರವಿಲ್ಲದೇ ಆಂಧ್ರದ ಪ್ರಗತಿ ಸಾಧ್ಯವಿಲ್ಲ: ಸಿಎಂ ನಾಯ್ಡು

ಅಮರಾವತಿ: ಕೇಂದ್ರ ಸರ್ಕಾರದ ನೆರವು ಇಲ್ಲದೆ ಆಂಧ್ರ ಪ್ರದೇಶವು ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳನ್ನೊಳಗೊಂಡ ಎನ್‌ಡಿಎ ಮೈತ್ರಿಕೂಟದಲ್ಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ನಾಯ್ಡು, ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡುತ್ತಿರುವ ನೆರವು, ವೆಂಟಿಲೇಟರ್‌ ಮೂಲಕ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಆಮ್ಲಜನಕ ನೀಡಿದಂತೆ ಎಂದು ಬಣ್ಣಿಸಿದ್ದಾರೆ.
ಕೇಂದ್ರದ ನೆರವಿನ ಮಹತ್ವ ಸಾರಿರುವ ಮುಖ್ಯಮಂತ್ರಿ, ಬರೋಬ್ಬರಿ ₹ 10 ಲಕ್ಷ ಕೋಟಿ ಸಾಲ ರಾಜ್ಯದ ಮೇಲಿದೆ. ಸುಮಾರು ₹ 1 ಲಕ್ಷ ಕೋಟಿಯಷ್ಟು ಬಿಲ್‌ ಬಾಕಿ ಇವೆ ಎಂದು ವಿವರಿಸಿದ್ದಾರೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು, ಬೊಕ್ಕಸದಲ್ಲಿದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೂ ಅಲ್ಲದೇ, ಕೇಂದ್ರದ ಅನುದಾನವನ್ನೂ ಬೇರಡೆ ವರ್ಗಾಯಿಸಿತ್ತು ಎಂದು ಆರೋಪಿಸಿದ್ದಾರೆ. ತಮ್ಮದೇ ರೀತಿಯಲ್ಲಿ ಪ್ರತಿ ಕ್ಷೇತ್ರದ ಅಭಿವೃದ್ಧಿಯ ವಿನ್ಯಾಸದ ದಾಖಲೆ ಸಿದ್ಧಪಡಿಸುವಂತೆ ಎನ್‌ಡಿಎ ಕೂಟದ ಶಾಸಕರು ಮತ್ತು ಸಂಸದರಿಗೆ ಸೂಚಿಸಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *